Joshua 21:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೇವಿಯ ಸಂತತಿಯವರಾದ ಗೇರ್ಷೋನ್ಯರಿಗೆ ಈ ಊರುಗಳನ್ನು ಕೊಡಲಾಯಿತು: ಮನಸ್ಸೆಕುಲದ ಅರ್ಧಜನರು ಅವರಿಗೆ ಬಾಷಾನಿನಲ್ಲಿದ್ದ ಆಶ್ರಯನಗರವಾದ ಗೋಲಾನ್ ನಗರವನ್ನು ಕೊಟ್ಟರು. ಮನಸ್ಸೆಯವರು ಬೆಯೆಷ್ಟೆರಾವನ್ನು ಸಹ ಅವರಿಗೆ ಕೊಟ್ಟರು. ಒಟ್ಟಿನಲ್ಲಿ ಈ ಮನಸ್ಸೆಕುಲದ ಅರ್ಧಜನರು ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೆರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು;
Kannada BSI Bible 2016
ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೇರ್ಷೋನ್ಯರ ಕುಟುಂಬಗಳಿಗೆ ಅರ್ಧಮನಸ್ಸೆಯವರ ಸ್ವಾಸ್ತ್ಯದಿಂದ ಕೊಲೆಮಾಡಿದವನ ಆಶ್ರಯನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳೂ
Kannada Bible (KNCL) BSI 2016
ಗೇರ್ಷೋನ್ಯರ ಕುಟುಂಬ಼ಗಳಿಗೆ ಅರ್ಧ ಮನಸ್ಸೆಯವರ ಸೊತ್ತಿನಿಂದ ದೊರಕಿದವುಗಳು ಇವು: ಕೊಲೆ ಮಾಡಿದವನಿಗೆ ಆಶ್ರಯನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ನಗರಗಳು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿ ಗೋತ್ರದ ಗೇರ್ಷೋನ್ಯರಿಗೆ ಮನಸ್ಸೆಯ ಅರ್ಧಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿನಲ್ಲಿರುವ ಗೋಲಾನನ್ನೂ ಬೆಯೆಷ್ಟೆರಾವನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.