Joshua 21:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಯೆಹೋವನ ಈ ಆಜ್ಞೆಯನ್ನು ಪಾಲಿಸಿದರು. ಅವರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಅವುಗಳ ಸುತ್ತಮುತ್ತಲಿನ ಭೂಮಿಯನ್ನು ಕೊಟ್ಟರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೆಹೋವನ ಆಜ್ಞೆಯಂತೆ ತಮ್ಮ ಸ್ವತ್ತಿನಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಅವರಿಗೆ ಕೊಟ್ಟರು.
Kannada BSI Bible 2016
ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೆಹೋವನ ಆಜ್ಞೆಯಂತೆ ಅವರಿಗೆ ತಮ್ಮ ಸ್ವಾಸ್ತ್ಯದಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟುಬಿಟ್ಟರು.
Kannada Bible (KNCL) BSI 2016
ಸರ್ವೇಶ್ವರನ ಆಜ್ಞೆಯಂತೆಯೇ ಅವರಿಗೆ ಸೊತ್ತಾಗಿ ಈ ಕೆಳಕಂಡ ನಗರಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಇಸ್ರಾಯೇಲರು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಯೆಹೋವ ದೇವರ ಆಜ್ಞೆಯ ಪ್ರಕಾರ ಪಟ್ಟಣಗಳನ್ನೂ ಗೋಮಾಳಗಳನ್ನೂ ಕೊಟ್ಟರು. ಅವುಗಳ ವಿವರ: