Joshua 21:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಫ್ತಾಲಿ ಕುಲದವರು ಗಲಿಲಾಯದ ಆಶ್ರಯನಗರವಾದ ಕೆದೆಷ್, ಹಮ್ಮೋತ್ದೋರ್, ಕರ್ತಾನ್ ಎಂಬವುಗಳನ್ನು ಕೊಟ್ಟರು. ಒಟ್ಟಿನಲ್ಲಿ ನಫ್ತಾಲಿಯರು ಮೂರು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು.
Kannada BSI Bible 2016
ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್‌ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಫ್ತಾಲಿ ಸ್ವಾಸ್ತ್ಯದಿಂದ ಕೊಲೆಮಾಡಿದವನ ಆಶ್ರಯನಗರವಾದ ಗಲಿಲಾಯದ ಕೆದೆಷ್, ಹಮ್ಮೋತ್ದೋರ್, ಕರ್ತಾನ್ ಎಂಬ ಗೋಮಾಳಸಹಿತವಾದ ಮೂರು ಪಟ್ಟಣಗಳೂ ದೊರಕಿದವು.
Kannada Bible (KNCL) BSI 2016
ನಫ್ತಾಲಿ ಸೊತ್ತಿನಿಂದ ಕೊಲೆಮಾಡಿದವನಿಗೆ ಆಶ್ರಯನಗರವಾದ ಗಲಿಲೇಯದ ಕೆದೆಷ್, ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ನಗರಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಫ್ತಾಲಿಯ ಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಹಮ್ಮೋತ್ ದೋರನ್ನೂ ಕರ್ತಾನನ್ನೂ ಹೀಗೆ ಮೂರು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.