Joshua 21:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಲೇವಿಯರು ಒಟ್ಟಿನಲ್ಲಿ ನಲವತ್ತೆಂಟು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಪಡೆದರು. ಈ ಎಲ್ಲ ಪಟ್ಟಣಗಳು ಬೇರೆ ಕುಲದವರ ಪ್ರದೇಶಗಳಲ್ಲಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರಿಗೆ ಇಸ್ರಾಯೇಲರ ಮಧ್ಯದಲ್ಲಿ ದೊರಕಿದ ಗೋಮಾಳ ಸಹಿತವಾದ ಪಟ್ಟಣಗಳು ನಲವತ್ತೆಂಟು.
Kannada BSI Bible 2016
ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರಿಗೆ ಇಸ್ರಾಯೇಲ್ಯರ ಮಧ್ಯದಲ್ಲಿ ದೊರಕಿದ ಗೋಮಾಳಸಹಿತವಾದ ಪಟ್ಟಣಗಳು ನಾಲ್ವತ್ತೆಂಟು.
Kannada Bible (KNCL) BSI 2016
ಲೇವಿಯರಿಗೆ ಇಸ್ರಯೇಲರ ನಡುವೆ ದೊರಕಿದ ಗೋಮಾಳ ಸಹಿತವಾದ ನಗರಗಳು ಒಟ್ಟು ನಾಲ್ವತ್ತೆಂಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ನಡುವೆ ಲೇವಿಯರಿಗೆ ಒಟ್ಟು ನಾಲ್ವತ್ತೆಂಟು ಪಟ್ಟಣಗಳು ಅವುಗಳ ಗೋಮಾಳ ಸಹಿತವಾಗಿ ದೊರಕಿದವು.