Joshua 21:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಯೆಹೋವನು ಇಸ್ರೇಲರಿಗೆ ಮಾಡಿದ ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದನು. ಆತನು ಅವರಿಗೆ ವಾಗ್ದಾನ ಮಾಡಿದ ದೇಶವನ್ನು ಕೊಟ್ಟನು. ಅವರು ಅದನ್ನು ಹಂಚಿಕೊಂಡು ವಾಸವಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.
Kannada BSI Bible 2016
ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಸ್ರಾಯೇಲ್ಯರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲ್ಯರಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಿಸಿಕೊಂಡು ಅದರಲ್ಲಿ ವಾಸಮಾಡಿದರು.
Kannada Bible (KNCL) BSI 2016
ಸರ್ವೇಶ್ವರಸ್ವಾಮಿ ಇಸ್ರಯೇಲರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಹೀಗೆ ಅವರಿಗೆ ಕೊಟ್ಟರು. ಇಸ್ರಯೇಲರು ಅದನ್ನು ವಶಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು.