Joshua 21:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೇರ್ಷೋನ್ಯ ಗೋತ್ರದವರಿಗೆ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು. ಈ ಪಟ್ಟಣಗಳು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದವರಿಗೆ ಸೇರಿದ ಪ್ರದೇಶಗಳಲ್ಲಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು.
Kannada BSI Bible 2016
ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಿರಿಗಿ ಚೀಟುಹಾಕುವಲ್ಲಿ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದಲೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು.
Kannada Bible (KNCL) BSI 2016
ಮತ್ತೆ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದ ಹದಿಮೂರು ನಗರಗಳು ದೊರೆತವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೇರ್ಷೋನ್ಯರಿಗೆ ಇಸ್ಸಾಕಾರನ ಗೋತ್ರದಲ್ಲಿಯೂ, ಆಶೇರನ ಗೋತ್ರದಲ್ಲಿಯೂ, ನಫ್ತಾಲಿಯ ಗೋತ್ರದಲ್ಲಿಯೂ, ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು.