Joshua 22:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲರೆಲ್ಲರೂ ನಿಮ್ಮನ್ನು ಕೇಳುವುದೇನೆಂದರೆ, ‘ಇಸ್ರೇಲಿನ ದೇವರ ವಿರುದ್ಧವಾಗಿ ನೀವು ಹೀಗೆ ಮಾಡಿದ್ದೇಕೆ? ನೀವು ಯೆಹೋವನ ವಿರುದ್ಧವಾಗಿ ತಿರುಗಿದ್ದೇಕೆ? ನಿಮಗಾಗಿ ಯಜ್ಞವೇದಿಕೆಯನ್ನು ಕಟ್ಟಿಕೊಂಡದ್ದೇಕೆ? ಇದು ದೇವರ ಉಪದೇಶಗಳಿಗೆ ವಿರುದ್ಧವಾಗಿದೆ ಎಂಬುದನ್ನು ನೀವು ಬಲ್ಲಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನ ಸರ್ವ ಸಭೆಯ ಮಾತನ್ನು ಕೇಳಿರಿ; ನೀವು ಇಸ್ರಾಯೇಲಿನ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ಯಜ್ಞವೇದಿಯನ್ನು ಕಟ್ಟಿಕೊಂಡದ್ದರಿಂದ ನೀವು ಯೆಹೋವನಿಗೆ ದ್ರೋಹ ಮಾಡಿದಂತಾಯಿತು; ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಂತಾಯಿತು.
Kannada BSI Bible 2016
ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಈ ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್‌ ದೇವರಿಗೆ ಮಾಡಿದ ಈ ಅಪರಾಧವೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಸರ್ವಸಭೆಯ ಮಾತನ್ನು ಕೇಳಿರಿ - ನೀವು ಇಸ್ರಾಯೇಲ್ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ವೇದಿಯನ್ನು ಕಟ್ಟಿಕೊಂಡದರಿಂದ ನೀವು ಯೆಹೋವನಿಗೆ ವಿಮುಖರಾದ ಹಾಗಾಯಿತಲ್ಲವೇ. ನೀವು ಈ ಹೊತ್ತು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದಂತಾಯಿತು.
Kannada Bible (KNCL) BSI 2016
“ಸರ್ವೇಶ್ವರನ ಸರ್ವಸಭೆ ಹೇಳುವ ಮಾತಿದು: ನೀವು ಇಸ್ರಯೇಲ್ ದೇವರಿಗೆ ವಿರುದ್ಧ ಇಂಥ ದ್ರೋಹ ಮಾಡಿದ್ದೇಕೆ? ನೀವು ನಿಮಗಾಗಿಯೇ ಒಂದು ಬಲಿಪೀಠವನ್ನು ಕಟ್ಟಿಕೊಂಡಿದ್ದೀರಿ. ಇದರಿಂದ ನೀವು ಸರ್ವೇಶ್ವರನಿಗೆ ವಿಮುಖವಾದಂತಾಯಿತು; ನೀವು ಇಂದು ಸರ್ವೇಶ್ವರನಿಗೆ ವಿರುದ್ಧ ತಿರುಗಿಬಿದ್ದಂತಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರ ಸರ್ವ ಸಮೂಹವು ಹೇಳುವುದೇನೆಂದರೆ: ‘ನೀವು ಈ ಹೊತ್ತು ಯೆಹೋವ ದೇವರ ಕಡೆಗೆ ತಿರುಗದೆ, ಅವರಿಗೆ ವಿರೋಧವಾಗಿ ತಿರುಗಿಬೀಳುವ ಹಾಗೆ ನಿಮಗೆ ಒಂದು ಬಲಿಪೀಠವನ್ನು ಕಟ್ಟಿಕೊಂಡು, ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು?