Joshua 22:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೆಗೋರ್‌ನಲ್ಲಿ ಏನಾಯಿತೆಂಬುದನ್ನು ಸ್ಮರಿಸಿಕೊಳ್ಳಿ ಆ ಪಾಪಕ್ಕಾಗಿ ನಾವು ಇನ್ನೂ ತೊಂದರೆಯನ್ನು ಅನುಭವಿಸುತ್ತಿದ್ದೇವೆ. ದೇವರು ನಮ್ಮಲ್ಲಿ ಬಹಳಷ್ಟು ಜನರನ್ನು ರೋಗಗ್ರಸ್ತರನ್ನಾಗಿ ಮಾಡಿದನು. ಆ ರೋಗದಿಂದ ಇಂದಿಗೂ ನಾವು ಕಷ್ಟಪಡುತ್ತಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಲಿಲ್ಲ.
Kannada BSI Bible 2016
ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಪೆಗೋರದ ಸಂಗತಿಯಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ಅದು ಇನ್ನೂ ಶುದ್ಧವಾಗಲಿಲ್ಲ.
Kannada Bible (KNCL) BSI 2016
ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೆ? ಅದರ ನಿಮಿತ್ತ ಸರ್ವೇಶ್ವರನ ಸಭೆಗೇ ಜಾಡ್ಯ ತಗಲಿತು. ಆದ್ದರಿಂದ ನಾವು ಇಂದಿಗೂ ಶುದ್ಧರಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೆಯೋರದವರ ದುಷ್ಟತನವು ನಮಗೆ ಅಲ್ಪವೋ? ಯೆಹೋವ ದೇವರ ಜನರ ಮೇಲೆ ವ್ಯಾಧಿ ಬಂದಿದ್ದರೂ ಈ ದಿನದವರೆಗೂ ಆ ಪಾಪದಿಂದ ನಾವು ಶುದ್ಧವಾಗಲಿಲ್ಲ.