Joshua 22:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಜೆರಹನ ಮಗನಾದ ಆಕಾನನನ್ನು ನೆನಪು ಮಾಡಿಕೊಳ್ಳಿ ನಾಶಪಡಿಸಬೇಕಾಗಿದ್ದ ವಸ್ತುಗಳ ಬಗ್ಗೆ ಆತನ ಆಜ್ಞೆಯನ್ನು ತಿರಸ್ಕರಿಸಿದನು. ಅವನು ದೇವರ ನಿಯಮಗಳನ್ನು ಉಲ್ಲಂಘಿಸಿದನು; ಆದರೆ ಶಿಕ್ಷೆಯು ಇಸ್ರೇಲಿನ ಎಲ್ಲ ಜನರಿಗಾಯಿತು. ಆಕಾನನು ತನ್ನ ಪಾಪದಿಂದಾಗಿ ಸತ್ತನು. ಆದರೆ ಬಹಳಷ್ಟು ಬೇರೆ ಜನರೂ ಸತ್ತರು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ” ಎಂದು ಹೇಳಿದನು.
Kannada BSI Bible 2016
ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಮತ್ತು ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ ಎಂದು ಹೇಳಿದರು.
Kannada Bible (KNCL) BSI 2016
ಜೆರಹನ ಮಗ ಆಕಾನನು ಸರ್ವೇಶ್ವರನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದ. ಆಗ ಸರ್ವೇಶ್ವರನ ಕೋಪ ಇಸ್ರಯೇಲರ ಸರ್ವಸಭೆಯ ಮೇಲೆ ಎರಗಿತು. ಅವನ ಪಾಪದ ನಿಮಿತ್ತ ಅವನೊಡನೆ ಅನೇಕರು ಸಾಯಬೇಕಾಯಿತಲ್ಲವೆ?” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೆರಹನ ಮಗ ಆಕಾನನು ಅರ್ಪಿತವಾದ ವಸ್ತುಗಳನ್ನು ಕದ್ದು ಅಪರಾಧವೆಸಗಿದಾಗ ಯೆಹೋವ ದೇವರ ಕೋಪವು ಸಮಸ್ತ ಇಸ್ರಾಯೇಲ್ ಜನರ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಇತರರೂ ಸಾಯಬೇಕಾಯಿತು,’ ” ಎಂದು ಹೇಳಿದರು.