Joshua 22:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ದೇವರ ಕಟ್ಟಳೆಗಳನ್ನು ಉಲ್ಲಂಘಿಸಿದ್ದರೆ ಯೆಹೋವನೇ ನಮ್ಮನ್ನು ಶಿಕ್ಷಿಸಲಿ ಎಂದು ಆತನಲ್ಲಿ ಕೇಳಿಕೊಳ್ಳುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಈ ಯಜ್ಞವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ.
Kannada BSI Bible 2016
ನಾವು ಕರ್ತನ ಕಡೆಗೆ ತಿರುಗಿಕೊಂಡು ದಹನಬಲಿಗಳ ನ್ನಾದರೂ ಆಹಾರ ಸಮರ್ಪಣೆಯನ್ನಾದರೂ ಸಮಾ ಧಾನದ ಬಲಿಗಳನ್ನಾದರೂ ಅದರ ಮೇಲೆ ಅರ್ಪಿಸುವ ದಕ್ಕೋಸ್ಕರ ಯಜ್ಞವೇದಿಯನ್ನು ನಮಗಾಗಿ ಕಟ್ಟಿದ್ದರೆ ಕರ್ತನು ಅದನ್ನು ವಿಚಾರಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವದಕ್ಕೋಸ್ಕರ ಈ ವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ.
Kannada Bible (KNCL) BSI 2016
ನಾವು ಸರ್ವೇಶ್ವರನಿಂದ ವಿಮುಖರಾಗಿ ದಹನಬಲಿಯನ್ನಾಗಲಿ, ಸಮಾಧಾನ ಬಲಿಯನ್ನಾಗಲಿ, ಧಾನ್ಯನೈವೇದ್ಯವನ್ನಾಗಲಿ ಸಮರ್ಪಿಸುವುದಕ್ಕಾಗಿ ಈ ಬಲಿಪೀಠವನ್ನು ಕಟ್ಟಿದ್ದರೆ ಸರ್ವೇಶ್ವರನೇ ನಮ್ಮನ್ನು ಶಿಕ್ಷಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಯೆಹೋವ ದೇವರ ಕಡೆಗೆ ತಿರುಗಿಕೊಂಡು ದಹನಬಲಿಗಳನ್ನಾದರೂ, ಧಾನ್ಯ ಸಮರ್ಪಣೆಯನ್ನಾದರೂ, ಸಮಾಧಾನದ ಸಮರ್ಪಣೆಗಳನ್ನಾದರೂ, ಅದರ ಮೇಲೆ ಅರ್ಪಿಸುವುದಕ್ಕೋಸ್ಕರ ಬಲಿಪೀಠವನ್ನು ನಮಗಾಗಿ ಕಟ್ಟಿದ್ದರೆ, ಯೆಹೋವ ದೇವರು ಅದನ್ನು ವಿಚಾರಿಸಲಿ.