Joshua 22:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನಮಗೆ ಜೋರ್ಡನ್ ನದಿಯ ಮತ್ತೊಂದು ದಡದಲ್ಲಿ ಭೂಮಿಯನ್ನು ಕೊಟ್ಟಿದ್ದಾನೆ. ಅಂದರೆ ಜೋರ್ಡನ್ ನದಿಯು ನಮ್ಮನ್ನು ಬೇರ್ಪಡಿಸುತ್ತದೆ. ನಿಮ್ಮ ಮಕ್ಕಳು ದೊಡ್ಡವರಾಗಿ ನಿಮ್ಮ ಭೂಮಿಯನ್ನು ಆಳುವಾಗ, ನಾವು ನಿಮ್ಮ ಜನರೆಂಬುದನ್ನು ಮರೆತುಬಿಡಬಹುದು. ‘ರೂಬೇನ್ಯರು, ಗಾದ್ಯರು ಆದ ನೀವು ಇಸ್ರೇಲಿನ ಅಂಗವಾಗಿಲ್ಲ’ ಎಂದು ಹೇಳಿ ನಮ್ಮ ಮಕ್ಕಳು ಯೆಹೋವನನ್ನು ಆರಾಧಿಸದಂತೆ ನಿಮ್ಮ ಮಕ್ಕಳು ತಡೆಯಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೂಬೇನ್ಯರೇ, ಗಾದ್ಯರೇ, ಯೆಹೋವನು ನಿಮಗೂ ನಮಗೂ ನಡುವೆ ಈ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದಾನೆ. ಯೆಹೋವನಲ್ಲಿ ನಿಮಗೆ ಯಾವ ಪಾಲೂ ಇಲ್ಲ ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೈವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು.
Kannada BSI Bible 2016
ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು;
Kannada BSI JV (ಕನ್ನಡ ಸತ್ಯವೇದವು J.V. (BSI))
ರೂಬೇನ್ಯರೇ, ಗಾದ್ಯರೇ, ಯೆಹೋವನು ನಮಗೂ ನಿಮಗೂ ನಡುವೆ ಯೊರ್ದನ್ ಹೊಳೆಯನ್ನು ಮೇರೆಯಾಗಿಟ್ಟಿದ್ದಾನೆ. ಆತನಲ್ಲಿ ನಿಮಗೇನೂ ಪಾಲಿಲ್ಲ ಎಂದು ಹೇಳಿ ಅವರನ್ನು ದೇವಭಕ್ತಿಯಿಂದ ತೊಲಗಿಸಿ ಬಿಟ್ಟಾರು ಎಂಬ ಭಯದಿಂದ ನಾವು -
Kannada Bible (KNCL) BSI 2016
ರೂಬೇನ್ಯರೇ, ಗಾದ್ಯರೇ, ಸರ್ವೇಶ್ವರ ನಿಮಗೂ ನಮಗೂ ನಡುವೆ ಈ ಜೋರ್ಡನ್ ನದಿಯನ್ನು ಸರಹದ್ದಾಗಿ ಇಟ್ಟಿದ್ದಾರೆ. ಸರ್ವೇಶ್ವರನಲ್ಲಿ ನಿಮಗೆ ಯಾವ ಪಾಲೂ ಇಲ್ಲ, ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೇವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೂಬೇನ್ಯರೇ, ಗಾದ್ಯರೇ ಯೆಹೋವ ದೇವರು ನಿಮಗೂ ನಮಗೂ ನಡುವೆ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದರಿಂದ ಯೆಹೋವ ದೇವರ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲ,’ ಎಂದು ಹೇಳಿ, ನಮ್ಮ ಮಕ್ಕಳನ್ನು ಯೆಹೋವ ದೇವರಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು.