Joshua 22:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳಿಗೆ ‘ನೀವು ಇಸ್ರೇಲಿಗೆ ಸಂಬಂಧಪಟ್ಟವರಲ್ಲ’ ಎಂದು ಹೇಳಿದರೆ, ನಮ್ಮ ಮಕ್ಕಳು ‘ಇಲ್ಲಿ ನೋಡಿ! ಗತಿಸಿಹೋದ ನಮ್ಮ ಪೂರ್ವಿಕರು ಒಂದು ಯಜ್ಞವೇದಿಕೆಯನ್ನು ಕಟ್ಟಿದ್ದಾರೆ. ಆ ಯಜ್ಞವೇದಿಕೆಯು ಪವಿತ್ರ ಗುಡಾರದಲ್ಲಿರುವ ಯಜ್ಞವೇದಿಕೆಯಂತಿದೆ. ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸುವುದಿಲ್ಲ. ನಾವು ಇಸ್ರೇಲಿಗೆ ಸೇರಿದವರೆಂಬುದಕ್ಕೆ ಈ ಯಜ್ಞವೇದಿಕೆ ಸಾಕ್ಷಿಯಾಗಿದೆ ಎಂದು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು.
Kannada BSI Bible 2016
ನಾವು ಅಂದುಕೊಂಡದ್ದೇನಂದರೆ--ಮುಂದೆ ನಮ ಗಾದರೂ ನಮ್ಮ ಸಂತತಿಯವರಿಗಾದರೂ ಹಾಗೆ ಹೇಳಿದರೆ ಆಗ ದಹನಬಲಿಗಳಿಗಾದರೂ ಬಲಿ ಗಳಿಗಾದರೂ ಅಲ್ಲ, ನಮಗೂ ನಿಮಗೂ ನಡುವೆ ಸಾಕ್ಷಿಗೋಸ್ಕರ ನಮ್ಮ ತಂದೆಗಳು ಮಾಡಿದ ಕರ್ತನ ಬಲಿಪೀಠದ ಹೋಲಿಕೆಯಾದ ಯಜ್ಞವೇದಿಯನ್ನು ನೋಡಿರಿ ಎಂದು ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಮುಂದೆ ನಮಗಾಗಲಿ ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದರೆ ನಾವು ಅವರಿಗೆ - ಈ ಯೆಹೋವವೇದಿಯ ಮಾದರಿಯನ್ನು ನೋಡಿರಿ; ನಮ್ಮ ಪಿತೃಗಳು ಇದನ್ನು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೋಸ್ಕರ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯದಲ್ಲಿ ಸಾಕ್ಷಿಯಾಗಿರುತ್ತದೆಯಷ್ಟೆ ಎಂದು ಹೇಳುವೆವು.
Kannada Bible (KNCL) BSI 2016
ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ ‘ಸರ್ವೇಶ್ವರನ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿ: ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದಲ್ಲದೆ ನಾವು, ‘ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತತಿಯವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ: ಯೆಹೋವ ದೇವರ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿರಿ, ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ. ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು.