Joshua 22:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನಿಗೆ ವಿರೋಧಿಗಳಾಗಲು ನಮಗೆ ನಿಜವಾಗಿಯೂ ಇಷ್ಟವಿಲ್ಲ. ಆತನಿಗೆ ಅವಿಧೇಯರಾಗುವುದಕ್ಕೂ ಇಷ್ಟವಿಲ್ಲ. ನಿಜವಾದ ಯಜ್ಞವೇದಿಕೆಯು ಪವಿತ್ರಗುಡಾರದ ಎದುರಿಗೆ ಮಾತ್ರ ಇದೆ. ಆ ಯಜ್ಞವೇದಿಕೆಯು ನಮ್ಮ ದೇವರಾದ ಯೆಹೋವನದು ಎಂಬುದನ್ನು ನಾವು ಬಲ್ಲೆವು” ಎಂಬುದಾಗಿ ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ” ಎಂದರು.
Kannada BSI Bible 2016
ನಮ್ಮ ದೇವರಾದ ಕರ್ತನ ಗುಡಾರದ ಮುಂದೆ ಇರುವ ಆತನ ಯಜ್ಞ ವೇದಿಯನ್ನು ಹೊರತಾಗಿ ನಾವು ದಹನಬಲಿಗಳಿ ಗೋಸ್ಕರವಾಗಿಯೂ ಆಹಾರ ಸಮರ್ಪಣೆಗಳಿ ಗೋಸ್ಕರವಾಗಿಯೂ ಬಲಿಗಳಿಗೋಸ್ಕರವಾಗಿಯೂ ಮತ್ತೊಂದು ಯಜ್ಞವೇದಿಯನ್ನು ಕಟ್ಟಿ ಕರ್ತನಿಗೆ ವಿರೋಧವಾಗಿ ತಿರುಗಿ ಬೀಳುವದೂ ಆತನ ಕಡೆ ಯಿಂದ ಹಿಂತಿರುಗಿ ಹೋಗುವದೂ ನಮಗೆ ದೂರ ವಾಗಿರಲಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ ಮೊದಲಾದವುಗಳನ್ನು ಸಮರ್ಪಿಸುವದಕ್ಕೋಸ್ಕರ ಬೇರೊಂದು ವೇದಿಯನ್ನು ಕಟ್ಟಿ ಯೆಹೋವನಿಗೆ ವಿಮುಖರಾಗಿ ದ್ರೋಹಿಗಳಾಗುವದು ನಮಗೆ ದೂರವಾಗಿರಲಿ ಅಂದರು.
Kannada Bible (KNCL) BSI 2016
ನಮ್ಮ ದೇವರಾದ ಸರ್ವೇಶ್ವರನ ಗುಡಾರದ ಮುಂದಿರುವ ಬಲಿಪೀಠದ ಹೊರತು ದಹನಬಲಿ, ಧಾನ್ಯನೈವೇದ್ಯ, ಸಮಾಧಾನಬಲಿ ಮೊದಲಾದವುಗಳನ್ನು ಸಮರ್ಪಿಸಲು ಬೇರೊಂದು ಬಲಿಪೀಠವನ್ನು ಕಟ್ಟಿ ಸರ್ವೇಶ್ವರನಿಗೆ ವಿಮುಖರಾಗಿ ದ್ರೋಹಿಗಳಾಗುವುದು ನಮಗೆ ದೂರ ಆಗಿರಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನಮ್ಮ ದೇವರಾದ ಯೆಹೋವ ದೇವರ ಗುಡಾರದ ಮುಂದೆ ಇರುವ ಅವರ ಯಜ್ಞವೇದಿಯನ್ನು ಅಲ್ಲದೆ ನಾವು ದಹನಬಲಿ, ಧಾನ್ಯ ನೈವೇದ್ಯ ಮತ್ತು ಇತರ ಬಲಿಗೋಸ್ಕರವಾಗಿಯೂ ಮತ್ತೊಂದು ಬಲಿಪೀಠವನ್ನು ಕಟ್ಟಿ, ಯೆಹೋವ ದೇವರಿಗೆ ವಿರೋಧವಾಗಿ ವಿಮುಖರಾಗಿ ತಿರುಗಿಬೀಳುವುದು ನಮಗೆ ದೂರವಾಗಿರಲಿ,” ಎಂದರು.