Joshua 22:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನಾದ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಮಾತುಗಳನ್ನು ಕೇಳಿದರು. ಇವರು ಹೇಳುತ್ತಿರುವುದು ಸತ್ಯ ಎಂದು ಅವರಿಗೆ ಮನದಟ್ಟಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳು, ರೂಬೇನ್, ಗಾದ್, ಮನಸ್ಸೆಯ ಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.
Kannada BSI Bible 2016
ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳೂ ರೂಬೇನ್ ಗಾದ್ ಮನಸ್ಸೆಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.
Kannada Bible (KNCL) BSI 2016
ಯಾಜಕ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದಿದ್ದ ಕುಲಾಧಿಪತಿಗಳು, ಇಸ್ರಯೇಲಿನ ಮುಖ್ಯಸ್ಥರು ರೂಬೇನ್, ಗಾದ್ ಹಾಗೂ ಮನಸ್ಸೆಕುಲಗಳವರ ಈ ಮಾತುಗಳನ್ನು ಕೇಳಿ ಸಂತೋಷಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರೂ ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರು ಹೇಳಿದ ಮಾತುಗಳನ್ನು ಕೇಳಿದಾಗ ಅವರಿಗೆ ಮೆಚ್ಚಿಕೆಯಾಯಿತು.