Joshua 22:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಫೀನೆಹಾಸನು ಮತ್ತು ಕುಲಾಧಿಪತಿಗಳು ಆ ಸ್ಥಳದಿಂದ ತಮ್ಮ ಮನೆಗಳಿಗೆ ಹೋದರು. ಅವರು ರೂಬೇನ್ಯರನ್ನು ಮತ್ತು ಗಾದ್ಯರನ್ನು ಗಿಲ್ಯಾದ್ ಪ್ರದೇಶದಲ್ಲಿ ಬಿಟ್ಟು ಕಾನಾನಿಗೆ ಹಿಂತಿರುಗಿ ನಡೆದ ಸಂಗತಿಯನ್ನು ಇಸ್ರೇಲರಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು, ಪ್ರಭುಗಳು, ಗಿಲ್ಯಾದ್ ಸೀಮೆಯಲ್ಲಿದ್ದ ರೂಬೇನ್ಯರು, ಗಾದ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲರ ಬಳಿಗೆ ಬಂದು, ಅವರಿಗೆ ಈ ವರ್ತಮಾನವನ್ನು ತಿಳಿಸಲು
Kannada BSI Bible 2016
ಯಾಜಕನಾದ ಎಲಿಯಾಜರನ ಮಗನಾದ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳನ್ನೂ ಗಾದನ ಮಕ್ಕಳನ್ನೂ ಬಿಟ್ಟು ಕಾನಾನ್ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ಬಳಿಗೆ ತಿರಿಗಿ ಬಂದು ಅವರಿಗೆ ವರ್ತಮಾನವನ್ನು ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನೂ ಪ್ರಭುಗಳೂ ಗಿಲ್ಯಾದ್ ಸೀಮೆಯಲ್ಲಿದ್ದ ರೂಬೇನ್ಯರು, ಗಾದ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲ್ಯರ ಬಳಿಗೆ ಬಂದು ಅವರಿಗೆ ಈ ವರ್ತಮಾನವನ್ನು ತಿಳಿಸಲು
Kannada Bible (KNCL) BSI 2016
ಯಾಜಕ ಎಲ್ಲಾಜಾರನ ಮಗ ಫೀನೆಹಾಸನು ಮತ್ತು ಮುಖ್ಯಸ್ಥರು ಗಿಲ್ಯಾದ್ ನಾಡಿನಲ್ಲಿದ್ದ ರೂಬೇನ್ಯರನ್ನು ಹಾಗೂ ಗಾದ್ಯರನ್ನು ಬೀಳ್ಕೊಟ್ಟು ಕಾನಾನ್ ನಾಡಿನಲ್ಲಿದ್ದ ಇಸ್ರಯೇಲರ ಬಳಿಗೆ ಬಂದು ಅವರಿಗೆ ಈ ಸಮಾಚಾರವನ್ನು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನಾದ ಎಲಿಯಾಜರನ ಮಗ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್ ದೇಶದಲ್ಲಿರುವ ರೂಬೇನ್ಯರನ್ನೂ ಗಾದ್ಯರನ್ನೂ ಬಿಟ್ಟು ಕಾನಾನ್ ದೇಶದಲ್ಲಿರುವ ಇಸ್ರಾಯೇಲರ ಬಳಿಗೆ ತಿರುಗಿಬಂದು, ಅವರಿಗೆ ವರ್ತಮಾನವನ್ನು ತಿಳಿಸಿದರು.