Joshua 22:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಇಸ್ರೇಲರಿಗೆ ಸಮಾಧಾನವಾಯಿತು. ಅವರು ಸಂತೋಷಪಟ್ಟು ದೇವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಅವರು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆ ಕುಲದವರೊಡನೆ ಯುದ್ಧ ಮಾಡಬಾರದೆಂದೂ ಅವರು ವಾಸಮಾಡುತ್ತಿರುವ ಪ್ರದೇಶವನ್ನು ನಾಶಮಾಡಬಾರದೆಂದೂ ನಿರ್ಧರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಬಹು ಸಂತೋಷಪಟ್ಟು ದೇವರನ್ನು ಕೊಂಡಾಡಿ ರೂಬೇನ್ ಗಾದ್ ಕುಲಗಳೊಡನೆ ಯುದ್ಧ ಮಾಡಿ ಅವರ ದೇಶವನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ಬಿಟ್ಟರು.
Kannada BSI Bible 2016
ಆ ಮಾತು ಇಸ್ರಾ ಯೇಲ್ ಮಕ್ಕಳಿಗೆ ಮೆಚ್ಚಿಗೆಯಾಯಿತು. ಆದದರಿಂದ ಇಸ್ರಾಯೇಲ್ ಮಕ್ಕಳೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ನಿವಾಸವಾಗಿದ್ದ ದೇಶವನ್ನು ನಾಶಮಾಡ ಬೇಕೆಂದು ಅವರ ಮೇಲೆ ಯುದ್ಧಕ್ಕೆ ಹೋಗಬೇಕೆಂಬ ಮಾತನ್ನು ಬಿಟ್ಟು ದೇವರನ್ನು ಕೊಂಡಾಡಿದರು.ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೂ ಬಹುಸಂತೋಷ ಪಟ್ಟು ದೇವರನ್ನು ಕೊಂಡಾಡಿ ರೂಬೇನ್ ಗಾದ್ ಕುಲಗಳೊಡನೆ ಯುದ್ಧಮಾಡಿ ಅವರ ದೇಶವನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ಬಿಟ್ಟರು.
Kannada Bible (KNCL) BSI 2016
ಅವರು ಕೂಡ ಬಹಳ ಸಂತೋಷಪಟ್ಟು ದೇವರಿಗೆ ಧನ್ಯವಾದ ಸಲ್ಲಿಸಿದರು. ರೂಬೇನ್ ಹಾಗೂ ಗಾದ್ ಕುಲಗಳೊಡನೆ ಯುದ್ಧಮಾಡಿ ಅವರ ನಾಡನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ತೊರೆದುಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮಾತನ್ನು ಇಸ್ರಾಯೇಲರು ಕೇಳಿ ಸಂತೋಷಪಟ್ಟು ದೇವರನ್ನು ಕೊಂಡಾಡಿದರು. ಆದ್ದರಿಂದ ಅವರು ರೂಬೇನ್ಯರೂ ಗಾದ್ಯರೂ ನಿವಾಸವಾಗಿದ್ದ ನಾಡಿನ ಮೇಲೆ ಯುದ್ಧಮಾಡಿ ಅವರನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು.