Joshua 22:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೂಬೇನ್ಯರು ಮತ್ತು ಗಾದ್ಯರು, “ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಕೆಯೇ ಸಾಕ್ಷಿ” ಎಂದು ಅದಕ್ಕೆ ‘ಏದ್’ ಎಂದು ಹೆಸರಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.
Kannada BSI Bible 2016
ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್‌ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬದಕ್ಕೆ ಈ ವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.
Kannada Bible (KNCL) BSI 2016
ರೂಬೇನ್ಯರು ಹಾಗೂ ಗಾದ್ಯರು ‘ಸರ್ವೇಶ್ವರನೇ ದೇವರು’ ಎಂಬುದಕ್ಕೆ ಈ ಬಲಿಪೀಠವೇ ಸಾಕ್ಷಿ ಎಂದು ಹೇಳಿ ಅದಕ್ಕೆ ‘ಏದ್’ ಎಂದು ಹೆಸರಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೂಬೇನ್ಯರೂ ಗಾದ್ಯರೂ ಆ ಬಲಿಪೀಠಕ್ಕೆ, “ನಮ್ಮ ನಡುವೆ ಯೆಹೋವ ದೇವರೇ ದೇವರಾಗಿದ್ದಾರೆ ಎಂಬುದಕ್ಕೆ ಸಾಕ್ಷಿ, ” ಎಂದು ಹೆಸರಿಟ್ಟರು.