Joshua 22:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ದೇವರಾದ ಯೆಹೋವನು ಇಸ್ರೇಲರಿಗೆ ಶಾಂತಿಯನ್ನು ದಯಪಾಲಿಸುವುದಾಗಿ ವಾಗ್ದಾನ ಮಾಡಿದ್ದನು. ಈಗ ಯೆಹೋವನು ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದ್ದಾನೆ. ಆದ್ದರಿಂದ ಈಗ ನೀವು ನಿಮ್ಮ ಮನೆಗಳಿಗೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಜೋರ್ಡನ್ ನದಿಯ ಪೂರ್ವಕ್ಕೆ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಈಗ ನೀವು ಆ ಪ್ರದೇಶದಲ್ಲಿರುವ ನಿಮ್ಮ ಮನೆಗಳಿಗೆ ಹೋಗಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.
Kannada BSI Bible 2016
ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿದ್ದದರಿಂದ ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟ ಸ್ವಾಸ್ತ್ಯದಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.
Kannada Bible (KNCL) BSI 2016
ಅವರು ತಮ್ಮ ವಾಗ್ದಾನಕ್ಕನುಸಾರ ನಿಮ್ಮ ಸಹೋದರರಿಗೆ ಈಗ ನೆಮ್ಮದಿಯನ್ನು ದಯಪಾಲಿಸಿದ್ದಾರೆ. ಆದುದರಿಂದ ಸರ್ವೇಶ್ವರನ ದಾಸನಾದ ಮೋಶೆ ಜೋರ್ಡನಿನ ಆಚೆಕಡೆ ನಿಮಗೆ ಕೊಟ್ಟ ಆಸ್ತಿಯನ್ನು ಅನುಭವಿಸುತ್ತಿರುವ ನಿಮ್ಮ ನಿಮ್ಮ ನಿವಾಸಿಗಳ ಬಳಿಗೆ ನೀವು ಹೋಗಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನಿಮ್ಮ ದೇವರಾದ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದ ಪ್ರಕಾರ, ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟಿದ್ದಾರೆ. ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಕಡೆ ನಿಮಗೆ ಕೊಟ್ಟ ಸೊತ್ತಿನ ದೇಶದಲ್ಲಿರುವ ನಿಮ್ಮ ನಿವಾಸಗಳಿಗೆ ನೀವು ಹೊರಡಿರಿ.