Joshua 22:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿಡಿ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ
Kannada BSI Bible 2016
ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವಿಧಿಗಳನ್ನು ಜಾಗರೂಕತೆಯಿಂದ ಕೈಕೊಳ್ಳಿರಿ. ಹೀಗಿರಲಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನೇ ಹೊಂದಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಆತನನ್ನು ಸೇವಿಸಿರಿ ಎಂದು ಹೇಳಿ
Kannada Bible (KNCL) BSI 2016
ಆದರೆ ಸರ್ವೇಶ್ವರನ ದಾಸ ಮೋಶೆಯು ನಿಮಗೆ ಕೊಟ್ಟ ಧರ್ಮಶಾಸ್ತ್ರವನ್ನೂ ವಿಧಿಗಳನ್ನೂ ಜಾಗರೂಕತೆಯಿಂದ ಕೈಗೊಳ್ಳಿರಿ; ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾರ್ಗದಲ್ಲಿ ನಡೆಯಿರಿ; ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನೇ ನೆಚ್ಚಿಕೊಂಡು ಪೂರ್ಣ ಮನಸ್ಸಿನಿಂದಲೂ ಪೂರ್ಣ ಪ್ರಾಣದಿಂದಲೂ ಅವರಿಗೆ ಸೇವೆ ಸಲ್ಲಿಸಿರಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ,” ಎಂದು ಹೇಳಿದನು.