Joshua 22:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಮನಸ್ಸೆಕುಲದ ಅರ್ಧಜನರಿಗೆ ಬಾಷಾನ್ ಪ್ರದೇಶವನ್ನು ಕೊಟ್ಟಿದ್ದನು. ಯೆಹೋಶುವನು ಮನಸ್ಸೆಕುಲದ ಉಳಿದರ್ಧ ಜನರಿಗೆ ಜೋರ್ಡನ್ ನದಿಯ ಪಶ್ಚಿಮಕ್ಕೆ ಭೂಮಿಯನ್ನು ಕೊಟ್ಟನು. ಯೆಹೋಶುವನು ಅವರನ್ನು ಆಶೀರ್ವದಿಸಿ ಮನೆಗೆ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಮನಸ್ಸೆ ಕುಲದ ಅರ್ಧ ಜನರಿಗೆ ಬಾಷಾನಿನಲ್ಲಿ ಸ್ವತ್ತನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳುಹಿಸುವಾಗ
Kannada BSI Bible 2016
ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಮ್ಮ ನಿವಾಸಗಳಿಗೆ ಹೋದರು. (ಮೋಶೆಯು ಮನಸ್ಸೆಕುಲದ ಅರ್ಧಜನರಿಗೆ ಬಾಷಾನಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟನು.) ಇದಲ್ಲದೆ ಯೆಹೋಶುವನು ಅವರನ್ನು ಆಶೀರ್ವದಿಸಿ ಸ್ವಸ್ಥಳಗಳಿಗೆ ಕಳುಹಿಸುವಾಗ ಅವರಿಗೆ -
Kannada Bible (KNCL) BSI 2016
(ಮೋಶೆ ಮನಸ್ಸೆಕುಲದ ಅರ್ಧಜನರಿಗೆ ಬಾಷಾನಿನಲ್ಲಿ ಪಾಲನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಜೋರ್ಡನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು). ಯೆಹೋಶುವ ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳಿಸುವಾಗ ಅವರಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸೊತ್ತನ್ನು ಕೊಟ್ಟಿದ್ದನು. ಇದಲ್ಲದೆ ಅವರ ಅರ್ಧ ಗೋತ್ರಕ್ಕೆ ಯೆಹೋಶುವನು ಸಹ ಯೊರ್ದನ್ ನದಿ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸೊತ್ತನ್ನು ಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಅವರ ಗುಡಾರಗಳಿಗೆ ಕಳುಹಿಸುವಾಗ ಅವರನ್ನು ಆಶೀರ್ವದಿಸಿ ಅವರಿಗೆ,