Joshua 23:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ಸಹಾಯದಿಂದ ನಿಮ್ಮಲ್ಲಿ ಒಬ್ಬ ಇಸ್ರೇಲಿಯು ಒಂದು ಸಾವಿರ ಮಂದಿ ಶತ್ರುಗಳನ್ನು ಸೋಲಿಸುವಂತಾಯಿತು; ಏಕೆಂದರೆ ನಿಮ್ಮ ದೇವರಾದ ಯೆಹೋವನು ನಿಮಗಾಗಿ ಯುದ್ಧ ಮಾಡುವುದಾಗಿ ಪ್ರಮಾಣ ಮಾಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.
Kannada BSI Bible 2016
ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವದಕ್ಕೆ ಶಕ್ತನಾದನು.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನದಂತೆ ನಿಮ್ಮ ಪರವಾಗಿ ಯುದ್ಧಮಾಡಿದರು. ಆದ್ದರಿಂದಲೇ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವಷ್ಟು ಶಕ್ತನಾದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ತಮ್ಮ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.