Joshua 23:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಿಮ್ಮ ದೇವರಾದ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತದಿಂದ ಹೊರಡಿಸುತ್ತಾನೆ. ಆ ಪ್ರದೇಶವನ್ನು ನೀವು ಪಡೆದುಕೊಳ್ಳುತ್ತೀರಿ. ನಿಮ್ಮ ದೇವರಾದ ಯೆಹೋವನು ನಿಮಗಾಗಿ ಇದನ್ನು ಮಾಡುವುದಾಗಿ ವಾಗ್ದಾನ ಮಾಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣೆದುರಿನಲ್ಲಿ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವಂತ ಮಾಡಿಕೊಳ್ಳುವಿರಿ.
Kannada BSI Bible 2016
ಇದಲ್ಲದೆ ನಿಮ್ಮ ದೇವ ರಾದ ಕರ್ತನು ಅವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿಬಿಡುವನು. ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣುಮುಂದೆ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವತಂತ್ರಿಸಿಕೊಳ್ಳುವಿರಿ.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರ ತಾವೇ ಉಳಿದವರನ್ನು ನಿಮ್ಮ ಕಣ್ಮುಂದೆ ಹೊರಡಿಸಿಬಿಡುವರು. ಅವರ ವಾಗ್ದಾನದಂತೆ ಆ ಜನರ ನಾಡನ್ನು ನೀವು ವಶಪಡಿಸಿಕೊಳ್ಳುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ಉಳಿದವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು, ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿ ಬಿಡುವರು. ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.