Joshua 23:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನ ಆಜ್ಞೆಗಳನ್ನೆಲ್ಲಾ ಜಾಗರೂಕತೆಯಿಂದ ಕೈಕೊಂಡು ನಡೆಯಿರಿ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಎಲ್ಲವನ್ನು ಪಾಲಿಸಿರಿ. ಆ ಧರ್ಮಶಾಸ್ತ್ರಕ್ಕೆ ವಿಮುಖರಾಗಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡಿರಿ.
Kannada BSI Bible 2016
ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ; ಎಡಕ್ಕಾದರೂ ಬಲಕ್ಕಾದರೂ ಓರೆಯಾಗಬೇಡಿರಿ.
Kannada Bible (KNCL) BSI 2016
ಮೋಶೆಯ ಧರ್ಮಶಾಸ್ತ್ರವನ್ನೂ ಎಲ್ಲಾ ವಿಧಿಗಳನ್ನೂ ಕೈಗೊಳ್ಳುವುದರಲ್ಲಿ ಸ್ಥಿರಚಿತ್ತದಿಂದಿರಿ. ಎಡಕ್ಕಾಗಲಿ ಬಲಕ್ಕಾಗಲಿ ಓರೆಯಾಗಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಬಲಗೊಳ್ಳಿರಿ, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ, ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವ ಎಲ್ಲವನ್ನು ಕೈಗೊಂಡು ನಡೆಯಿರಿ.