Joshua 23:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರಲ್ಲದ ಕೆಲವು ಜನರು ನಮ್ಮೊಂದಿಗೆ ವಾಸಮಾಡಿಕೊಂಡಿದ್ದಾರೆ. ಅವರು ತಮ್ಮ ದೇವರುಗಳನ್ನೇ ಪೂಜಿಸುತ್ತಾರೆ. ಅವರೊಂದಿಗೆ ಸ್ನೇಹ ಮಾಡಬೇಡಿ. ಅವರ ದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ಮಾಡಬೇಡಿ. ಆ ದೇವರುಗಳ ಹೆಸರುಗಳ ಮೂಲಕ ಬೇಡಿಕೊಳ್ಳಬೇಡಿ. ಅವುಗಳ ಮೇಲೆ ಪ್ರಮಾಣ ಮಾಡಬೇಡಿ. ಅವುಗಳಿಗೆ ಅಡ್ಡಬಿದ್ದು ಪೂಜಿಸಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.
Kannada BSI Bible 2016
ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿದಿರುವ ಈ ಜನಾಂಗಗಳ ಜೊತೆಯಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಲೂ ಪ್ರಮಾಣಮಾಡಲೂಬಾರದು, ಅವುಗಳಿಗೆ ಅಡ್ಡಬಿದ್ದು ಸೇವಿಸಲೂಬಾರದು.
Kannada Bible (KNCL) BSI 2016
ಉಳಿದಿರುವ ಈ ಜನಾಂಗಗಳ ಜೊತೆ ಸೇರಿಕೊಳ್ಳಬೇಡಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಬಾರದು, ಪ್ರಮಾಣ ಮಾಡಬಾರದು, ಅವುಗಳನ್ನು ಪೂಜಿಸಬಾರದು. ಅವುಗಳಿಗೆ ಸೇವೆ ಮಾಡಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವರುಗಳ ಹೆಸರುಗಳನ್ನು ಸ್ಮರಿಸಲೂ ಬೇಡಿರಿ. ಅವುಗಳ ಮೇಲೆ ಆಣೆಯೂ ಇಡಬೇಡಿರಿ. ಅವುಗಳಿಗೆ ಆರಾಧನೆ ಮಾಡಬಾರದು. ಅಡ್ಡಬೀಳಲೂಬಾರದು.