Joshua 23:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೊಡ್ಡದಾದ ಮತ್ತು ಪ್ರಬಲವಾದ ಜನಾಂಗಗಳನ್ನು ಸೋಲಿಸಲು ಯೆಹೋವನು ನಿಮಗೆ ನೆರವಾದನು. ಆತನು ಅವರನ್ನು ತನ್ನ ಬಲವುಳ್ಳ ಹಸ್ತದಿಂದ ಹೊರಗಟ್ಟಿದನು. ನಿಮ್ಮನ್ನು ಸೋಲಿಸಲು ಯಾವ ಜನಾಂಗಕ್ಕೂ ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ. ನಿಮ್ಮ ಮುಂದೆ ಈವರೆಗೂ ಒಬ್ಬನೂ ತಲೆಯೆತ್ತಿ ನಿಲ್ಲಲಿಲ್ಲವಲ್ಲಾ.
Kannada BSI Bible 2016
ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ಈ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮಹಾಪರಾಕ್ರವಿುಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ; ನಿಮ್ಮ ಮುಂದೆ ಈವರೆಗೆ ಒಬ್ಬನೂ ನಿಲ್ಲಲಿಲ್ಲವಲ್ಲಾ.
Kannada Bible (KNCL) BSI 2016
ಸರ್ವೇಶ್ವರ ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾರೆ. ನಮ್ಮನ್ನು ಪ್ರತಿಭಟಿಸಿ ನಿಂತವನು ಒಬ್ಬನೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ನಿಮ್ಮ ಮುಂದೆ ಬಲವಾದ ದೊಡ್ಡ ರಾಷ್ಟ್ರಗಳನ್ನು ಸಹ ಹೊರಡಿಸಿಬಿಟ್ಟರು. ನಿಮ್ಮ ಮುಂದೆ ಈವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.