Joshua 24:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಸೈನಿಕರು ಯುದ್ಧಮಾಡಲು ಹೋಗುತ್ತಿರುವಾಗ ನಾನು ಅವರಿಗಿಂತ ಮುಂಚೆಯೇ ಕಡಜದ ಹುಳಗಳ ಗುಂಪನ್ನು ಕಳಿಸಿದ್ದೆ. ಈ ಹುಳಗಳು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಹೀಗೆ ನೀವು ಖಡ್ಗಗಳನ್ನು ಮತ್ತು ಬಿಲ್ಲುಬಾಣಗಳನ್ನು ಉಪಯೋಗಿಸದೆಯೇ ಆ ಪ್ರದೇಶವನ್ನು ವಶಪಡಿಸಿಕೊಂಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.
Kannada BSI Bible 2016
ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದಾದದ್ದಲ್ಲ.
Kannada Bible (KNCL) BSI 2016
ಇದಲ್ಲದೆ ಕಣಜದ ಹುಳುಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆ. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದ ಆದುದಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳುಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸರನ್ನೂ ನಿಮ್ಮ ಮುಂದೆ ಓಡಿಸಿಬಿಟ್ಟವು. ಇದು ಆದದ್ದು ನಿಮ್ಮ ಖಡ್ಗದಿಂದಲ್ಲಾ, ನಿಮ್ಮ ಬಿಲ್ಲಿನಿಂದಲ್ಲಾ.