Joshua 24:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ವ್ಯವಸಾಯ ಮಾಡದೆ ಬೆಳೆದಿರುವ ಭೂಮಿಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ವಾಸಿಸುತ್ತಿದ್ದೀರಿ. ನೀವು ನೆಟ್ಟು ಬೆಳೆಸದೆ ಇರುವ ದ್ರಾಕ್ಷಿ, ಎಣ್ಣೆಮರ ಇವುಗಳ ಫಲಗಳನ್ನು ಅನುಭವಿಸುತ್ತೀದ್ದೀರಿ”
Kannada BSI Bible 2016
ನೀವು ದುಡಿಯದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು; ನೀವು ಅವುಗಳಲ್ಲಿ ವಾಸವಾಗಿದ್ದೀರಿ; ನೀವು ನೆಡದ ದ್ರಾಕ್ಷೇ ತೋಟಗಳ ಫಲವನ್ನೂ ಇಪ್ಪೇತೋಪುಗಳ ಫಲವನ್ನೂ ತಿನ್ನುತ್ತೀರಿ ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ವ್ಯವಸಾಯಮಾಡದೆ ಬೆಳೆದಿರುವ ಭೂವಿುಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ನೀವು ವಾಸಿಸುತ್ತೀರಿ. ನೀವು ನೆಟ್ಟು ಬೆಳಸದೆ ಇರುವ ದ್ರಾಕ್ಷೆ, ಎಣ್ಣೇಮರ ಇವುಗಳ ತೋಟಗಳನ್ನು ಅನುಭವಿಸುತ್ತಿದ್ದೀರಿ ಎಂಬದೇ.
Kannada Bible (KNCL) BSI 2016
ನೀವು ಕೃಷಿಮಾಡದ, ಬೆಳೆ ತುಂಬಿದ ಭೂಮಿಯನ್ನು ನಿಮಗೆ ಕೊಟ್ಟೆ, ನೀವು ಕಟ್ಟದ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿ ಹಾಗೂ ಎಣ್ಣೆಮರಗಳ ತೋಟಗಳನ್ನು ಅನುಭವಿಸುತ್ತಿದ್ದೀರಿ’.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ವ್ಯವಸಾಯಮಾಡದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು. ನೀವು ಅವುಗಳಲ್ಲಿ ವಾಸವಾಗಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿತೋಟಗಳ ಫಲವನ್ನೂ ಹಿಪ್ಪೆತೋಪುಗಳ ಫಲವನ್ನೂ ಅನುಭವಿಸುತ್ತಿದ್ದೀರಿ,’ ಎಂಬುದೇ.