Joshua 24:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಜನರನ್ನು ಈಜಿಪ್ಟಿನಿಂದ ಹೊರತಂದವನು ನಮ್ಮ ದೇವರಾದ ಯೆಹೋವನೆಂದು ನಮಗೆ ಗೊತ್ತು. ನಾವು ಈಜಿಪ್ಟಿನಲ್ಲಿ ಗುಲಾಮರಾಗಿದ್ದೆವು; ಆದರೆ ಯೆಹೋವನು ಅಲ್ಲಿ ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿ ನಮ್ಮನ್ನು ಅಲ್ಲಿಂದ ಬಿಡಿಸಿಕೊಂಡು ಬಂದನು. ನಾವು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿಕೊಂಡು ಬರುವಾಗ ನಮ್ಮನ್ನು ರಕ್ಷಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.
Kannada BSI Bible 2016
ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನೂ ನಮ್ಮ ಪಿತೃಗಳನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನೇ ಅಲ್ಲವೇ.
Kannada Bible (KNCL) BSI 2016
ನಾವು ದಾಸತ್ವದಲ್ಲಿದ್ದ ಈಜಿಪ್ಟಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರತಂದವರು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಭುತಕಾರ್ಯಗಳನ್ನು ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಮ್ಮ ದೇವರಾದ ಯೆಹೋವ ದೇವರು ತಾವೇ ನಮ್ಮನ್ನೂ ನಮ್ಮ ಪಿತೃಗಳನ್ನೂ ದಾಸತ್ವದ ಮನೆಯಾದ ಈಜಿಪ್ಟ್ ದೇಶದಿಂದ ಬರಮಾಡಿ, ನಮ್ಮ ಕಣ್ಣುಗಳ ಮುಂದೆ ಆ ಅದ್ಭುತ ಸೂಚಕಕಾರ್ಯಗಳನ್ನು ಮಾಡಿ, ನಾವು ನಡೆದ ಎಲ್ಲಾ ಮಾರ್ಗಗಳಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದವರು.