Joshua 24:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದೇಶಗಳ ಜನರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದನು. ಈಗ ನಾವಿರುವ ಸ್ಥಳದಲ್ಲಿ ಮುಂಚೆ ವಾಸಮಾಡಿಕೊಂಡಿದ್ದ ಅಮೋರಿಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ. ಅದಕ್ಕಾಗಿ ನಾವು ಯೆಹೋವನ ಸೇವೆಯನ್ನು ಮುಂದುವರಿಸುತ್ತೇವೆ; ಏಕೆಂದರೆ ಆತನು ನಮ್ಮ ದೇವರು” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.
Kannada BSI Bible 2016
ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದೇಶವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವಜನಾಂಗಗಳನ್ನು ನಮ್ಮ ಮುಂದೆ ಹೊರಡಿಸಿ ಬಿಟ್ಟವನು ಆತನೇ. ಆದದರಿಂದ ನಾವೂ ಯೆಹೋವನನ್ನೇ ಸೇವಿಸುವೆವು; ಆತನೇ ನಮ್ಮ ದೇವರು ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ಈ ನಾಡಿನ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನರನ್ನು ಯೆಹೋವ ದೇವರು ನಮ್ಮ ಮುಂದೆ ಹೊರಡಿಸಿಬಿಟ್ಟರು. ಆದ್ದರಿಂದ ನಾವು ಯೆಹೋವ ದೇವರನ್ನೇ ಸೇವಿಸುವೆವು. ಏಕೆಂದರೆ ಅವರು ನಮ್ಮ ದೇವರು,” ಎಂದರು.