Joshua 24:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ ‘ತೆರಹ’ ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
Kannada BSI Bible 2016
ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ಅವರೆಲ್ಲರಿಗೆ - ನಿಮ್ಮ ದೇವರಾದ ಯೆಹೋವನು ಹೇಳುವದೇನಂದರೆ - ಅಬ್ರಹಾಮ್, ನಾಹೋರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ [ಯೂಫ್ರೇಟೀಸ್] ಹೊಳೆಯ ಆಚೆಯಲ್ಲಿದ್ದು ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
Kannada Bible (KNCL) BSI 2016
ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಅವರೆಲ್ಲರಿಗೂ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ‘ಪೂರ್ವದಲ್ಲಿ ನಿಮ್ಮ ಮೂಲ ಪುರುಷರಾದ ಅಬ್ರಹಾಮನಿಗೂ ನಾಹೋರನಿಗೂ ತಂದೆಯಾದ ತೆರಹನು ಯೂಫ್ರೇಟೀಸ್ ನದಿಯ ಆಚೆ ವಾಸವಾಗಿದ್ದಾಗ ಅವರೆಲ್ಲರೂ ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.