Joshua 24:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಯೆಹೋವನನ್ನು ಬಿಟ್ಟು ಅನ್ಯದೇವರುಗಳ ಸೇವೆಮಾಡಿದರೆ ಆತನು ನಿಮಗೆ ಕೇಡನ್ನು ಬರಮಾಡುವನು. ಯೆಹೋವನು ನಿಮ್ಮನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯವನಾಗಿದ್ದಾನೆ. ಆದರೆ ನೀವು ಆತನಿಗೆ ವಿಮುಖರಾದರೆ ಆತನು ನಿಮ್ಮನ್ನು ನಾಶಮಾಡುತ್ತಾನೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು.
Kannada BSI Bible 2016
ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಆತನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರೆ ಆತನು ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವನು ಅಂದನು.
Kannada Bible (KNCL) BSI 2016
ನೀವು ಅವರನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸಿದರೆ ನಿಮಗೆ ವಿಮುಖರಾಗಿ, ಒಳಿತಿಗೆ ಬದಲಾಗಿ ಕೇಡನ್ನೇ ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವರು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿದರೆ, ಅವರು ನಿಮಗೆ ಒಳ್ಳೆಯದನ್ನು ಮಾಡದೆ ಕೇಡನ್ನು ಬರಮಾಡಿ ನಿಮ್ಮನ್ನು ದಹಿಸಿಬಿಡುವರು,” ಎಂದು ಹೇಳಿದನು.