Joshua 24:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋಶುವನು, “ಹಾಗಾದರೆ ನಿಮ್ಮಲ್ಲಿರುವ ಸುಳ್ಳುದೇವರುಗಳನ್ನು ಎಸೆದುಬಿಡಿ. ಇಸ್ರೇಲರ ದೇವರಾದ ಯೆಹೋವನ ಕಡೆಗೆ ನಿಮ್ಮ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋಶುವನು ಅವರಿಗೆ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದುಹಾಕಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದನು.
Kannada BSI Bible 2016
ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋಶುವನು ಅವರಿಗೆ - ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದು ಹಾಕಿ ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ ಅಂದನು.
Kannada Bible (KNCL) BSI 2016
ಆಗ ಯೆಹೋಶುವ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೊರೆದುಬಿಟ್ಟು ಇಸ್ರಯೇಲಿನ ದೇವರಾದ ಸರ್ವೇಶ್ವರನ ಕಡೆಗೆ ನಿಮ್ಮ ಹೃನ್ಮನಗಳನ್ನು ತಿರುಗಿಸಿಕೊಳ್ಳಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋಶುವನು ಅವರಿಗೆ, “ಹಾಗಾದರೆ, ಈಗ ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೊರೆದು, ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಸಿರಿ,” ಎಂದನು.