Joshua 24:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಶುವನು ಇವುಗಳನ್ನು ದೇವರ ಧರ್ಮಶಾಸ್ತ್ರ ಗ್ರಂಥದಲ್ಲಿ ಬರೆದನು. ಯೆಹೋಶುವನು ಅಲ್ಲಿದ್ದ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಈ ಒಡಂಬಡಿಕೆಗೆ ಸಾಕ್ಷಿಯಾಗಿ ಅದನ್ನು ಯೆಹೋವನ ಪವಿತ್ರಗುಡಾರದ ಹತ್ತಿರವಿದ್ದ ಓಕ್ ಮರದ ಕೆಳಗೆ ನಿಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ,
Kannada BSI Bible 2016
ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲೇ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ
Kannada Bible (KNCL) BSI 2016
ಇದು ಮಾತ್ರವಲ್ಲ, ಈ ಎಲ್ಲಾ ಮಾತುಕತೆಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದಿಟ್ಟನು. ಒಂದು ದೊಡ್ಡ ಕಲ್ಲನ್ನು ಸರ್ವೇಶ್ವರನ ಆಲಯದ ಹತ್ತಿರದಲ್ಲೇ ಇದ್ದ ಓಕ್ ವೃಕ್ಷದ ಅಡಿಯಲ್ಲಿ ನಿಲ್ಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮಾತುಗಳನ್ನು ಯೆಹೋಶುವನು ದೇವರ ನಿಯಮದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ಎತ್ತಿ, ಅದನ್ನು ಯೆಹೋವ ದೇವರ ಪರಿಶುದ್ಧಸ್ಥಳದ ಬಳಿಯಲ್ಲಿ ಇದ್ದ ಏಲಾ ಮರದ ಕೆಳಗೆ ನೆಟ್ಟನು.