Joshua 24:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.
Kannada BSI Bible 2016
ಇದ ಲ್ಲದೆ ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಅವರು ಶೆಕೆಮಿನಲ್ಲಿ ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯಗಳಿಗೆ ಕೊಂಡು ಕೊಂಡಿದ್ದ, ಯೋಸೇಫನ ಮಕ್ಕಳಿಗೆ ಬಾಧ್ಯತೆ ಯಾದ, ನೆಲದ ಭಾಗದಲ್ಲಿ ಹೂಣಿಟ್ಟರು.ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವಾಸ್ತ್ಯವಾಯಿತು.
Kannada Bible (KNCL) BSI 2016
ಇಸ್ರಯೇಲರು ಈಜಿಪ್ಟಿನಿಂದ ತಂದ ಜೋಸೆಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯ ಕೊಟ್ಟು ಕೊಂಡುಕೊಂಡಿದ್ದನು. ಅದು ಜೋಸೆಫ್ಯರ ಸೊತ್ತಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಈಜಿಪ್ಟಿನಿಂದ ತಂದ ಯೋಸೇಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿ ನಾಣ್ಯಗಳನ್ನು ಕೊಟ್ಟು ಕೊಂಡುಕೊಂಡಿದ್ದನು. ಅದು ಯೋಸೇಫ್ಯರ ಸೊತ್ತಾಗಿತ್ತು.