Joshua 24:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರೋನನ ಮಗನಾದ ಎಲ್ಲಾಜಾರನು ಮರಣಹೊಂದಿದನು. ಗಿಬೇತ್‌ನಲ್ಲಿ ಎಲ್ಲಾಜಾರನನ್ನು ಸಮಾಧಿ ಮಾಡಲಾಯಿತು. ಗಿಬೇತ್ ಊರು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿತ್ತು. ಆ ಊರನ್ನು ಎಲ್ಲಾಜಾರನ ಮಗನಾದ ಫೀನೆಹಾಸನಿಗೆ ಕೊಡಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.
Kannada BSI Bible 2016
ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನ ಮಗನಾದ ಎಲ್ಲಾಜಾರನೂ ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರಾಂತದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.
Kannada Bible (KNCL) BSI 2016
ಆರೋನನ ಮಗ ಎಲ್ಲಾಜಾರನೂ ಮರಣಹೊಂದಿದನು. ಅವನ ಶವವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಅವನ ಮಗ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನ ಮಗ ಎಲಿಯಾಜರನೂ ಮರಣಹೊಂದಿದನು. ಅವನನ್ನು ಅವನ ಮಗ ಫೀನೆಹಾಸನಿಗೆ ಎಫ್ರಾಯೀಮ್ ಬೆಟ್ಟದ ದೇಶದಲ್ಲಿ ಕೊಡಲಾದ ಗಿಬೆಯದಲ್ಲಿ ಸಮಾಧಿಮಾಡಿದರು.