Joshua 24:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸಾಕನಿಗೆ ಯಾಕೋಬ ಮತ್ತು ಏಸಾವ ಎಂಬ ಗಂಡುಮಕ್ಕಳನ್ನು ಕೊಟ್ಟೆನು. ಏಸಾವನಿಗೆ ಸೇಯೀರ್ ಪರ್ವತಗಳ ಸುತ್ತಮುತ್ತಲಿನ ಪ್ರದೇಶವನ್ನು ಕೊಟ್ಟೆನು. ಯಾಕೋಬ ಮತ್ತು ಅವನ ಮಕ್ಕಳು ಅಲ್ಲಿ ಇರಲಿಲ್ಲ. ಅವರು ಈಜಿಪ್ಟ್ ದೇಶದಲ್ಲಿ ವಾಸಮಾಡಲು ಹೋಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸಾಕನಿಗೆ ಯಾಕೋಬ, ಏಸಾವ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿ, ಏಸಾವನಿಗೆ ಸೇಯೀರ್ ಪರ್ವತವನ್ನೂ ಸ್ವತ್ತಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.
Kannada BSI Bible 2016
ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸಾಕನಿಗೆ ಯಾಕೋಬ್, ಏಸಾವ್ ಎಂಬಿಬ್ಬರು ಮಕ್ಕಳನ್ನು ಅನುಗ್ರಹಿಸಿ ಏಸಾವನಿಗೆ ಸೇಯೀರ್ ಪರ್ವತವನ್ನು ಸ್ವಾಸ್ತ್ಯವಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.
Kannada Bible (KNCL) BSI 2016
ಇಸಾಕನಿಗೆ ಯಕೋಬ್ ಮತ್ತು ಏಸಾವ್ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿದೆ. ಏಸಾವನಿಗೆ ಸೇಯೀರ್ ಬೆಟ್ಟವನ್ನು ಸ್ವಂತ ಸೊತ್ತಾಗಿ ದಯಪಾಲಿಸಿದೆ. ಯಕೋಬನಾದರೋ ತನ್ನ ಮಕ್ಕಳ ಸಮೇತ ಈಜಿಪ್ಟ್ ದೇಶಕ್ಕೆ ಹೋದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯೀರ್ ಪರ್ವತದ ನಾಡನ್ನು ಸೊತ್ತಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಈಜಿಪ್ಟಿಗೆ ಹೋದರು.