Joshua 24:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ನಾನು ಮೋಶೆ ಆರೋನರನ್ನು ಈಜಿಪ್ಟಿಗೆ ಕಳುಹಿಸಿದೆ. ಅವರು ನನ್ನ ಜನರನ್ನು ಈಜಿಪ್ಟಿನಿಂದ ಹೊರತರಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಈಜಿಪ್ಟಿನಲ್ಲಿ ಅನೇಕ ಅದ್ಭುತವಾದ ಕಾರ್ಯಗಳನ್ನು ನಡೆಸಿ ನಾನು ನಿಮ್ಮ ಜನರನ್ನು ಈಜಿಪ್ಟಿನಿಂದ ಹೊರಗೆ ತಂದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ನಾನು ಮೋಶೆ, ಆರೋನರನ್ನೂ ಕಳುಹಿಸಿ, ಆ ಐಗುಪ್ತದಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ, ಅವರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆನು.
Kannada BSI Bible 2016
ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ನಾನು ಮೋಶೆ ಆರೋನರನ್ನು ಕಳುಹಿಸಿ ಆ ಐಗುಪ್ತ್ಯರಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ ಅವರನ್ನು ಬಾಧಿಸಿ ನಿಮ್ಮನ್ನು ಹೊರಗೆ ಕರತಂದೆನು.
Kannada Bible (KNCL) BSI 2016
ಬಳಿಕ ನಾನು ಮೋಶೆ ಹಾಗೂ ಆರೋನರನ್ನು ಕಳಿಸಿ, ಆ ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿ, ಆ ಜನರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ, ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಈಜಿಪ್ಟನ್ನು ಬಾಧಿಸಿದೆನು. ತರುವಾಯ ನಿಮ್ಮನ್ನು ಹೊರಗೆ ತಂದೆನು.