Joshua 24:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ನಿಮ್ಮ ಪೂರ್ವಿಕರು ಈಜಿಪ್ಟಿನಿಂದ ಹೊರಡು ಕೆಂಪು ಸಮುದ್ರಕ್ಕೆ ಬಂದರು. ಈಜಿಪ್ಟಿನ ಜನರು ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಅವರನ್ನು ಬೆನ್ನಟ್ಟಿಕೊಂಡು ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಪೂರ್ವಿಕರು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪು ಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು.
Kannada BSI Bible 2016
ನಾನು ನಿಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಐಗುಪ್ತ್ಯರು ರಥಗಳ ಸಂಗಡಲೂ ರಾಹುತರ ಸಂಗಡಲೂ ನಿಮ್ಮ ಪಿತೃಗಳನ್ನು ಕೆಂಪು ಸಮುದ್ರದ ವರೆಗೂ ಹಿಂದಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಪಿತೃಗಳು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪುಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತ್ಯರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು.
Kannada Bible (KNCL) BSI 2016
ನಿಮ್ಮ ಪೂರ್ವಜರು ಈಜಿಪ್ಟಿನಿಂದ ಬಿಡುಗಡೆಯಾಗಿ ಕೆಂಪುಸಮುದ್ರಕ್ಕೆ ಬರುತ್ತ ಇರುವಾಗ ಈಜಿಪ್ಟಿನವರು ರಥಾಶ್ವಬಲಗಳ ಸಹಿತ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಈಜಿಪ್ಟಿನವರು ರಥಗಳ ಮತ್ತು ರಾಹುತರ ಸಂಗಡ ನಿಮ್ಮ ಪೂರ್ವಜರನ್ನು ಕೆಂಪು ಸಮುದ್ರದವರೆಗೂ ಹಿಂದಟ್ಟಿದರು.