Joshua 24:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರೇಲರೊಂದಿಗೆ ಯುದ್ಧಮಾಡಲು ಸಿದ್ಧತೆಮಾಡಿದನು. ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ನಿಮ್ಮನ್ನು ಶಪಿಸಲು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲರಾದ ನಿಮಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೆ ಎದ್ದು ನಿಮ್ಮನ್ನು ಶಪಿಸುವುದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.
Kannada BSI Bible 2016
ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲ್ಯರಾದ ನಿಮಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಎದ್ದು ನಿಮ್ಮನ್ನು ಶಪಿಸುವದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೇಕಳುಹಿಸಿದನು.
Kannada Bible (KNCL) BSI 2016
ಆಮೇಲೆ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಯೇಲರಾದ ನಿಮ್ಮ ವಿರುದ್ಧ ಯುದ್ಧಮಾಡಲು ಎದ್ದ. ನಿಮ್ಮನ್ನು ಶಪಿಸಲು ಬೆಯೋರನ ಮಗ ಬಿಳಾಮನಿಗೆ ಕರೆ ಕಳುಹಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗನಾದ ಬಾಲಾಕನು ಎದ್ದು, ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.