Joshua 3:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ, ಬೆಳಗಿನ ಜಾವದಲ್ಲಿ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಎದ್ದು ಆಕಾಶಿಯದಿಂದ ಹೊರಟು ಜೋರ್ಡನ್ ನದಿಯವರೆಗೆ ಬಂದರು. ಅವರು ಜೋರ್ಡನ್ ನದಿಯನ್ನು ದಾಟುವ ಮೊದಲು ಅಲ್ಲಿ ಪಾಳೆಯ ಮಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.
Kannada BSI Bible 2016
ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್‌ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ಬೆಳಿಗ್ಗೆ ಎದ್ದನು; ಅವನೂ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲಿ ಇಳುಕೊಂಡರು.
Kannada Bible (KNCL) BSI 2016
ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಅವನೊಂದಿಗೆ ಇಸ್ರಯೇಲರು ಎಲ್ಲರೂ ಶಿಟ್ಟೀಮನ್ನು ಬಿಟ್ಟು ಜೋರ್ಡನ್ನಿನ ಹತ್ತಿರಕ್ಕೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಬೆಳಿಗ್ಗೆ ಎದ್ದು, ಅವನೂ, ಇಸ್ರಾಯೇಲರೆಲ್ಲರೂ ಶಿಟ್ಟೀಮಿನಿಂದ ಪ್ರಯಾಣಮಾಡಿ, ಯೊರ್ದನ್ ನದಿ ಬಳಿಗೆ ಬಂದು, ದಾಟುವುದಕ್ಕಿಂತ ಮುಂಚೆ ಅಲ್ಲಿ ಇಳಿದುಕೊಂಡರು.