Joshua 3:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.
Kannada BSI Bible 2016
ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿರುತ್ತಾನೆಂಬದೂ ಆತನು ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು ಇವರನ್ನೆಲ್ಲಾ ನಿಮ್ಮ ಮುಂದೆ ತಪ್ಪದೆ ಹೊರಡಿಸುವನೆಂಬದೂ
Kannada Bible (KNCL) BSI 2016
ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯೆ ಇದ್ದಾರೆಂದು ನಿಮಗೆ ಈಗ ತಿಳಿಯುವುದು. ಅದೇ ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಮುಂದಿನಿಂದ ಓಡಿಸಿಬಿಡುವರೆಂದು ನಿಮಗೆ ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.