Joshua 3:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರು ಯೆಹೋವನ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವರು. ಯೆಹೋವನು ಸರ್ವಲೋಕದ ಒಡೆಯನಾಗಿದ್ದಾನೆ. ಅವರು ಆ ಪೆಟ್ಟಿಗೆಯನ್ನು ನಿಮ್ಮ ಮುಂದೆ ಜೋರ್ಡನ್ ನದಿಯಲ್ಲಿ ತೆಗೆದುಕೊಂಡು ಹೋಗುವರು. ಅವರು ನೀರಿನಲ್ಲಿ ಪ್ರವೇಶ ಮಾಡಿದಾಗ ಜೋರ್ಡನ್ ನದಿಯ ನೀರು ಹರಿಯದೆ ನಿಂತುಬಿಡುವುದು. ನೀರು ಮುಂದಕ್ಕೆ ಹರಿಯದೆ ಹರಡಿಕೊಂಡು ಸರೋವರದಂತೆ ತೋರುವುದು” ಎಂದು ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು.
Kannada BSI Bible 2016
ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ಹೊಳೆಯ ನೀರಲ್ಲಿ ಇಡುತ್ತಲೇ ಮೇಲಣಿಂದ ಬರುವ ನೀರು ಮುಂದೆ ಹೋಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವದು ಎಂದು ತಿಳಿಸಿದನು.
Kannada Bible (KNCL) BSI 2016
ಸರ್ವಲೋಕದ ಒಡೆಯನಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಜೋರ್ಡನ್ ನದಿಯ ನೀರಿನಲ್ಲಿ ಇಡುತ್ತಲೇ ಮೇಲಿಂದ ಹರಿದುಬರುವ ನೀರು ಮುಂದೆ ಸಾಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು,” ಎಂದು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಸ್ತ ಭೂಮಿಗೂ ಒಡೆಯರಾಗಿರುವ ಯೆಹೋವ ದೇವರ ಮಂಜೂಷವನ್ನು ಹೊರುವ ಯಾಜಕರ ಪಾದಗಳು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ, ಮೇಲಿನಿಂದ ಹರಿದು ಬರುವ ನೀರು ಮುಂದೆ ಹರಿಯದೆ ಅಲ್ಲಿಯೇ ರಾಶಿಯಾಗಿ ನಿಲ್ಲುವುದು,” ಎಂದು ಹೇಳಿದನು.