Joshua 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರು ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ನಡೆದರು. ಜನರು ತಾವು ಪಾಳೆಯ ಮಾಡಿಕೊಂಡಿದ್ದ ಸ್ಥಳದಿಂದ ಹೊರಟು ಜೋರ್ಡನ್ ನದಿಯ ಕಡೆಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಯೊರ್ದನ್ ನದಿಯನ್ನು ದಾಟುವುದಕ್ಕೋಸ್ಕರ ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.
Kannada BSI Bible 2016
ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಯೊರ್ದನ್ ಹೊಳೆಯನ್ನು ದಾಟುವದಕ್ಕೋಸ್ಕರ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.
Kannada Bible (KNCL) BSI 2016
ಜನರು ಜೋರ್ಡನ್ ನದಿಯನ್ನು ದಾಟಲು ತಮ್ಮ ತಮ್ಮ ಡೇರೆಗಳಿಂದ ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಜನರು ಯೊರ್ದನ್ ನದಿಯನ್ನು ದಾಟಲು ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಜನರಿಗೆ ಮುಂದಾಗಿ ಹೊತ್ತುಕೊಂಡು ಹೋದರು.