Joshua 3:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.
Kannada BSI Bible 2016
ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್‌ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.
Kannada Bible (KNCL) BSI 2016
ಮೇಲಿಂದ ಬರುತ್ತಿದ್ದ ನೀರು ಬಹು ದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದುಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.