Joshua 3:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ಥಳದಲ್ಲಿ ನೆಲವು ಒಣಗಿತ್ತು; ಯಾಜಕರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನದಿಯ ಮಧ್ಯದವರೆಗೆ ತೆಗೆದುಕೊಂಡು ಹೋಗಿ ಅಲ್ಲಿ ನಿಂತುಕೊಂಡರು. ಯಾಜಕರು ಅಲ್ಲಿಯೇ ನಿಂತುಕೊಂಡಿರಲಾಗಿ ಎಲ್ಲಾ ಇಸ್ರೇಲರು ಒಣನೆಲದ ಮೇಲೆ ನಡೆದುಕೊಂಡು ಹೋಗಿ ಜೋರ್ಡನ್ ನದಿಯನ್ನು ದಾಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.
Kannada BSI Bible 2016
ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲಾ ಯೊರ್ದನಿನ ಆಚೆಗೆ ಸೇರಿದರು.
Kannada Bible (KNCL) BSI 2016
ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ನಡುವೆ ನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಯೇಲರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಹೀಗೆ ಜನರೆಲ್ಲರೂ ಜೋರ್ಡನಿನ ಆಚೆಗೆ ಸೇರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು.