Joshua 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೆಹೋಶುವನು ಯಾಜಕರಿಗೆ, “ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜನಗಳ ಮುಂದೆ ನದಿಯ ಕಡೆಗೆ ನಡೆಯಿರಿ” ಎಂದನು. ಯಾಜಕರು ಪೆಟ್ಟಿಗೆಯನ್ನು ಹೊತ್ತುಕೊಂಡು ಜನರ ಮುಂದೆ ನಡೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.
Kannada BSI Bible 2016
ಆಗ ಯೆಹೋಶುವನು ಯಾಜಕರಿಗೆ--ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹಾದುಹೋಗಿರಿ ಅಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯಾಜಕರಿಗೆ - ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಅವರ ಮುಂದಾಗಿ ಹೋದರು.
Kannada Bible (KNCL) BSI 2016
ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು.