Joshua 3:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಯೆಹೋಶುವನಿಗೆ, “ನಾನು ನಿನ್ನನ್ನು ಇಂದಿನಿಂದ ಎಲ್ಲಾ ಇಸ್ರೇಲರ ಮುಂದೆ ಘನವಂತನನ್ನಾಗಿ ಮಾಡುವೆನು. ನಾನು ಮುಂಚೆ ಮೋಶೆಯ ಸಂಗಡ ಇದ್ದಂತೆಯೇ ನಿನ್ನ ಸಂಗಡವೂ ಇದ್ದೇನೆಂಬುದು ಆಗ ಜನರಿಗೆ ತಿಳಿಯುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.
Kannada BSI Bible 2016
ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಯೆಹೋಶುವನಿಗೆ - ನಾನು ಇಂದಿನಿಂದ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂಬದು ಅವರಿಗೆ ಗೊತ್ತಾಗುವದು.
Kannada Bible (KNCL) BSI 2016
ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಯೆಹೋಶುವನಿಗೆ, “ನಾನು ಮೋಶೆಯ ಸಂಗಡ ಇದ್ದ ಪ್ರಕಾರ, ನಿನ್ನ ಸಂಗಡ ಇರುವುದನ್ನು ಇಸ್ರಾಯೇಲರೆಲ್ಲರೂ ತಿಳಿಯುವಂತೆ, ನಾನು ಈ ದಿನ ನಿನ್ನನ್ನು ಅವರ ಮುಂದೆ ಉನ್ನತಗೊಳಿಸುವೆನು.