Joshua 4:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ. ಯೆಹೋವನ ಅಪ್ಪಣೆಗಳನ್ನೆಲ್ಲ ಅವರು ಕೈಗೊಳ್ಳುವವರೆಗೆ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ಮಧ್ಯದಲ್ಲಿ ನಿಂತುಕೊಂಡೇ ಇದ್ದರು. ಜನರು ತ್ವರಿತಗತಿಯಿಂದ ನದಿಯನ್ನು ದಾಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು.
Kannada BSI Bible 2016
ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವವರೆಗೂ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು. ಜನರು ಬೇಗನೆ ಹೊಳೆದಾಟಿದರು.
Kannada Bible (KNCL) BSI 2016
ಮೋಶೆ ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಸರ್ವೇಶ್ವರನ ಅಪ್ಪಣೆಗಳನ್ನೆಲ್ಲ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ಮಧ್ಯದಲ್ಲೇ ನಿಂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ, ಯೆಹೋವ ದೇವರು ಆಜ್ಞಾಪಿಸಿದ್ದೆಲ್ಲಾ ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿ ನಡುವೆಯೇ ನಿಂತರು. ಜನರು ತ್ವರೆಯಾಗಿ ಆಚೆಗೆ ದಾಟಿಹೋದರು.