Joshua 4:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ನದಿ ದಾಟಿದ ಮೇಲೆ ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಜನರ ಮುಂದಗಡೆಯಲ್ಲಿ ತೆಗೆದುಕೊಂಡು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಬೇಗನೆ ಹೊಳೆ ದಾಟಿದರು. ಅವರೆಲ್ಲರು ಆಚೆ ದಡ ಸೇರಿದ ಮೇಲೆ ಯಾಜಕರು ಯೆಹೋವನ ಮಂಜೂಷ ಸಹಿತವಾಗಿ ಹೊಳೆ ದಾಟಿ ಜನರ ಎದುರಿನಲ್ಲಿ ಹೋದರು.
Kannada BSI Bible 2016
ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರೆಲ್ಲಾ ಆಚೆಗೆ ಸೇರಿದ ಮೇಲೆ ಯಾಜಕರು ಯೆಹೋವನ ಮಂಜೂಷಸಹಿತವಾಗಿ ದಾಟಿ ಜನರ ಮುಂಗಡೆಯಲ್ಲಿ ಹೋದರು.
Kannada Bible (KNCL) BSI 2016
ಜನರು ಬೇಗನೆ ನದಿ ದಾಟಿದರು. ಅವರೆಲ್ಲರು ಆಚೆಗೆ ಸೇರಿದ ಮೇಲೆ ಯಾಜಕರು ಸರ್ವೇಶ್ವರನ ಮಂಜೂಷದೊಡನೆ ನದಿ ದಾಟಿ ಜನರ ಮುಂದುಗಡೆಯೇ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರೆಲ್ಲರೂ ಆಚೆಗೆ ದಾಟಿದ ಮೇಲೆ ಯೆಹೋವ ದೇವರ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.