Joshua 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ಮೋಶೆಯ ಆಜ್ಞೆಯನ್ನು ಪಾಲಿಸಿದರು. ಇವರು ಬೇರೆಯವರಿಗಿಂತ ಮುಂಚೆಯೇ ನದಿಯನ್ನು ದಾಟಿದರು. ಯೆಹೋವನು ವಾಗ್ದಾನ ಮಾಡಿದ ದೇಶವನ್ನು ಪಡೆಯಲು ಇಸ್ರೇಲರಿಗೆ ಸಹಾಯ ಮಾಡಲು ಇವರು ಯುದ್ಧಸನ್ನದ್ಧರಾಗಿ ಹೋಗುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೂಬೇನ್ಯರೂ, ಗಾದ್ಯರೂ, ಮನಸ್ಸೆ ಕುಲದ ಅರ್ಧ ಗೋತ್ರದವರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ದರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.
Kannada BSI Bible 2016
ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ ಮಕ್ಕಳ ಮುಂದೆ ಹಾದುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.
Kannada Bible (KNCL) BSI 2016
ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆ ಕುಲದ ಅರ್ಧಜನರು ಮೋಶೆ ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಯೇಲರಿಗಿಂತ ಮುಂದಾಗಿ ಹೊರಟು ನದಿ ದಾಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಗೋತ್ರದವರು ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಾಯೇಲರಿಗಿಂತ ಮುಂದಾಗಿ ಹಾದುಹೋದರು.